Latest

ಕೊರೊನಾ ಅಬ್ಬರ; ಆತಂಕ ವ್ಯಕ್ತಪಡಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆ, ಕಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಹಲವು ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಕಠಿಣ ಸಂದರ್ಭ ಎದುರಿಸುತ್ತಿರುವ ಸಂದರ್ಭದಲ್ಲಿ ಬೆಡ್ ವ್ಯವಸ್ಥೆ ಮಾಡಿ ಸಹಕಾರ ನೀದಬೇಕು ಎಂದು ಮನವಿ ಮಾಡಿದರು.

Home add -Advt

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ರಾಜ್ಯದಲ್ಲಿ ಕೊರೊನಾ ಸೋಂಕು 5-6 ಪಟ್ಟು ಹೆಚ್ಚಾಗಿದೆ. ಸಾವಿನ ಸಂಖ್ಯೆಯೂ ಕೈಮೀರಿ ಹೋಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಬೆಡ್ ನೀಡುವ ಮೂಲಕ ಸಹಾಯ ಮಾಡಬೇಕು. ಕೋವಿಡ್ ಕುರಿತು ಎಲ್ಲರೂ ಜಾಗೃತರಾಗಿರಬೇಕು ಎಂದು ಹೇಳಿದರು.

 

Related Articles

Back to top button