ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದ್ದು, ಆಯಾ ಜಿಲ್ಲೆಗಳಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರಿಗೆ ಖಡಕ್ ಆದೇಶ ನೀಡಿದ್ದಾರೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾವು-ನೋವಿನ ಸಂಖ್ಯೆ ಏರಿಯಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ನಮಗಿರುವ ಕಡೇಯ ಅಸ್ತ್ರ. ಈ ನಿಟ್ಟಿನಲ್ಲಿ ಈ ನಿಟ್ಟಿನಲ್ಲಿ ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು ಎಂದು ಸೂಚಿಸಿದ್ದಾರೆ.
ಜನತಾ ಕರ್ಫ್ಯೂನಲ್ಲಿ ಆದಂತೆ ಕಾಟಾಚಾರದ ಕ್ರಮಗಳು ಆಗಬಾರದು. ಈ ಬಾರಿ ಎಡವಿದರೆ ಭಾರಿ ಬೆಲೆ ತೆರೆಬೇಕಾದೀತು. ಜಿಲ್ಲೆಗಳಲ್ಲಿ ಕೋವಿಡ್ ಮಾರ್ಗಸೂಚಿ, ಲಾಕ್ ಡೌನ್ ಕಟ್ಟುನಿಟ್ಟಿನ ಕ್ರಮಗಳು ಸಮರ್ಪಕವಾಗಿ ಜಾರಿಗೆ ತರುವಂತೆ ನೋಡಿಕೊಳ್ಳುವುದು ಸಚಿವರ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ.
ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ