ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಚಾಲನೆ ನೀದಿದರು. ಈ ವೇಳೆ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಗಳ ಕುರಿತ ಕಿರುಹೊತ್ತಿಗೆ ’ಪುಟಕ್ಕಿಟ್ಟ ಚಿನ್ನ’ ಬಿಡುಗಡೆ ಮಾಡಲಾಯಿತು.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್ ಅಶೋಕ್, ಸಚಿವ ಸುರೇಶ್ ಕುಮಾರ್, ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್, ನೂತನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ಶಾಸಕ ರವಿ ಸುಬ್ರಹ್ಮಣ್ಯ, ಬಿ ಜೆ ಪುಟ್ಟಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ