Latest

*ಗಾಭರಿಪಡುವ ಅಗತ್ಯವಿಲ್ಲ, ಆದರೆ…ಹೊಸ ವರ್ಷಾಚರಣೆಗೆ ಮಾರ್ಗಸೂಚಿ*

 

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕೊರೊನಾ ರೂಪಾಂತರಿ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ನಾನೂ ಕೂಡ ಒಂದು ಸಭೆ ಮಾಡಿದ್ದೇನೆ. ಪ್ರಧಾನಿ ಮೋದಿಯವರು ಸಭೆ ಕರೆದು ಎಲ್ಲಾ ರಾಜ್ಯಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸಚಿವರಾದ್ ಆರ್.ಅಶೋಕ್, ಸುಧಾಕರ್ ಅವರು ಕೂಡ ಸಭೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರ ಸೂಚಿಸಿದಂತೆ ಕ್ರಮಕೈಗೊಳ್ಳಲು ಈಗಾಗಲೇ ನಾನು ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತೆಯನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಬೂಸ್ಟರ್ ಡೋಸ್ ಗಳನ್ನು ಕೊಡಲಾಗುತ್ತಿದೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಕ್ಯಾಂಪ್ ಗಳನ್ನು ಮಾಡಿ ದೊಡ್ಡಮಟ್ಟದಲ್ಲಿ ಲಸಿಕೆ ನೀಡಬೇಕು. ಐಎಲ್ ಐ, ಸಾರಿ ಟೆಸ್ಟ್ ಗಳನ್ನು ಕಡ್ಡಾಯಗೊಳಿಸಬೇಕು. ಒಳಾಂಗಣಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕು. ಆರೋಗ್ಯ ಇಲಾಖೆಯಲ್ಲಿ ಔಷದಿಗಳನ್ನು, ಲಸಿಕೆ, ಆಕ್ಸಿಜನ್ ಸಂಗ್ರಹಕ್ಕೆ ಸೂಚನೆ ನೀಡಿದ್ದೇನೆ ಎಂದರು.

Home add -Advt

ಜನರು ಗಾಬರಿಯಾಗುವ ಅಗತ್ಯವಿಲ್ಲ, ಆದರೆ ಬಹಳ ಎಚ್ಚರಿಕೆಯಿಂದ ಜಾಗೃತರಾಗಿರುವ ಅಗತ್ಯವಿದೆ. ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಗ್ಗೆ ನಾಳೆ ಕಂದಾಯ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

Related Articles

Back to top button