Latest

ಎಸ್.ಸಿ./ಎಸ್.ಟಿ ಗೆ ಸೇರ್ಪಡೆಗೊಳಿಸಲು ಇತರೆ ಸಮುದಾಯಗಳ ಒತ್ತಾಯ: ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ ಎ ಸ್.ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.

ಪರವಾನಗಿ ಇಲ್ಲದ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕ್ಕೆ ಸೂಚನೆ
ಓಲಾ, ಊಬರ್ ಪರವಾನಗಿ ರದ್ದಾಗಿರುವ ಬಗ್ಗೆ ಸಾರಿಗೆ ಆಯುಕ್ತರೊಂದಿಗೆ ಮಾತನಾಡಿದ್ದು, ಯಾವುದೇ ಪರವಾನಗಿ ಇಲ್ಲದೆ ಯಾವ ಸಂಸ್ಥೆಯನ್ನೂ ನಡೆಸಬಾರದು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದರು.

ಗಂಧದಗುಡಿ ಟೀಸರ್ ಬಿಡುಗಡೆಗೆ ಆಹ್ವಾನ
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮ ಉದ್ಘಾಟಿಸಲು ಆಮಂತ್ರಣ ನೀಡಿದರು. ರಾಘವೇಂದ್ರ ರಾಜ್ ಕುಮಾರ್ ಅವರೂ ಇದ್ದರು ಎಂದರು.

ಮುಳುಗುತ್ತಿರುವ ಕಾಂಗ್ರೆಸ್ ಹಡಗಿನಿಂದ ಹಲವರು ಜಿಗಿದು ಬರ್ತಾರೆ: ಸಿಎಂ ಬೊಮ್ಮಾಯಿ

https://pragati.taskdun.com/politics/bjp-janasankalpa-yatrecm-basavaraj-bommairaichur/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button