ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೊಲೀಸ್ ಧ್ವಜ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೋರಮಂಗಲದ ಕೆ ಎಸ್ ಆರ್ ಪಿ ಮೈದಾನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೇರೆ ಇಲಾಖೆ ಸಿಬ್ಬಂದಿಗಳಿಗೂ, ಪೊಲೀಸ್ ಇಲಾಖೆಗಳಿಗೂ ಬಹಳ ವ್ಯತ್ಯಾಸವಿದೆ. ಜನರ ಹಾಗೂ ಸಮಾಜದಲ್ಲಿ ಕಾನೂನು, ಶಾಂತಿ ಕಾಪಾಡುವುದು ಪೊಲೀಸರ ಕರ್ತವ್ಯ. ಇಲಾಖೆಯಲ್ಲಿ ದಕ್ಷತೆ ಹಾಗೂ ನಿಷ್ಠೆ ಬಹಳ ಮುಖ್ಯ. ದೇಶದಲ್ಲೆ ಕರ್ನಾಟಕ ಪೊಲೀಸ್ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು,.
ಪೊಲೀಸ್ ಅಧಿಕಾರಿಗಳು ಕರ್ತವ್ಯ ಮಾಡುವಾಗ ನ್ಯಾಯ, ನಿಸ್ಪಕ್ಷಪಾತದಿಂದ ಕೆಲಸ ಮಾಡಬೇಕು. ಪೊಲೀಸ್ ಇಂಟಲಿಜನ್ಸ್ ನ ಹೊಸ ತಂತ್ರಜ್ಞಾನ ಹಾಗೂ ಸಿಬ್ಬಂದಿಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬೆಳಗಾವಿಯ ವಿಜಯ ಸಿನ್ನೂರ್ ಸೇರಿದಂತೆ ರಾಜ್ಯದ 135 ಪೊಲೀಸರಿಗೆ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಹಬ್ಬದ ಸಂಭ್ರಮದಲ್ಲೇ ಮತ್ತೆ ಏರಿಕೆಯಾಯ್ತು ಚಿನ್ನಾಭರಣಗಳ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ