ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ 1ರಿಂದ 5ನೇ ತರಗತಿವರೆಗೆ ಶಾಲೆಗಳ ಆರಂಭದ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಳೆಯಿಂದ 6-8ನೇ ತರಗತಿವರೆಗಿನ ಭೌತಿಕ ತರಗತಿಗಳು ಆರಂಭವಾಗಲಿದೆ. ವಾರದಲ್ಲಿ 5 ದಿನಗಳ ಕಾಲ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಎಲ್ಲಾ ರೀತಿಯ ಮುಂಜಾಗೃತಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಪ್ರಾಥಮಿಕ ಶಾಲೆ ತೆರೆಯುವ ವಿಚಾರವಾಗಿ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಮುಂದಿನ ದಿನಗಳಲ್ಲಿ 1-5ನೇ ತರಗತಿಗಳ ಭೌತಿಕ ತರಗತಿಗಳ ಆರಂಭಕ್ಕೆ ನಿರ್ಧರಿಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ