ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹ ಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ. ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
*ಗೃಹ ಸಚಿವರಿಗೆ ರಕ್ಷಣೆ ಇಲ್ಲ ಅಂದ್ರೆ ಜನರ ಪರಿಸ್ಥಿತಿಯೇನಿರಬಹುದು?; ಡಿ.ಕೆ.ಶಿವಕುಮಾರ್ ಪ್ರಶ್ನೆ*
https://pragati.taskdun.com/d-k-shivakumarreactionamith-shahmangalore-visit/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ