ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ರಾಜ್ಯಕ್ಕೆ ಆಗಮಿಸಲಿದ್ದು, ಸಿದ್ದಗಂಗಾ ಶ್ರೀಗಳ ಹುಟ್ಟು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಕ್ಕೆ ಅಮಿತ್ ಶಾ ಭೇಟಿಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಏಪ್ರಿಲ್ 1ರಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಅವರು, ಸಿದ್ದಗಂಗಾ ಶ್ರೀಗಳ ಹುಟ್ಟು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ. ಮಠದಲ್ಲಿಯೇ ಭೋಜನ ಸ್ವೀಕಾರ ಮಾಡಲಿದ್ದಾರೆ ಎಂದರು.
ಬಳಿಕ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿನ ಶಾಲೆಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕ್ಷೀರ ಸಮೃದ್ಧಿ ಬ್ಯಾಂಕ್ ನ ಲಾಂಚನ ಬಿಡುಗಡೆ ಮಾಡಲಿದ್ದಾರೆ. ಹಾಲು ಉತ್ಪಾದಕರಿಗೆ ಅನುಕೂಲವಾಗಲಿರುವ ಯೋಜನೆ ಇದಾಗಿದ್ದು, ಈಗಾಗಲೇ ಬಜೆಟ್ ನಲ್ಲಿಯೂ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.
26 ಲಕ್ಷ ಹಾಲು ಉತ್ಪಾದಕರು ರಾಜ್ಯದಲ್ಲಿದ್ದು, ಅನೇಕ ಹಾಲು ಉತ್ಪಾದಕರಿಗೆ ಕ್ಷೀರ ಸಮೃದ್ಧಿ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಹಿಜಾಬ್ ಬೆನ್ನಲ್ಲೇ ರಾಜ್ಯದಲ್ಲಿ ಆರಂಭವಾದ ಹಲಾಲ್ ವಿವಾದ; ಏನಿದು ಹಲಾಲ್-ಜಟ್ಕಾ ಕಟ್?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ