LatestUncategorized

*ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ: ಟಾಂಗ್ ನೀಡಿದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಕೊಪ್ಪಳದದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನೂ ಇಲ್ಲ ಎಂದು ಹೇಳಿದರು.

ಭಿನ್ನಾಭಿಪ್ರಾಯ ಶುದ್ಧ ಸುಳ್ಳು:
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.

ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.

Home add -Advt

ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

*ಜನಾರ್ಧನ ರೆಡ್ಡಿ ಪರ ಮಾಜಿ ಸಿಎಂ ಯಡಿಯೂರಪ್ಪ ಬ್ಯಾಟಿಂಗ್*

https://pragati.taskdun.com/janardhana-reddyb-s-yedyurappareactionkoppala/

Related Articles

Back to top button