Latest

ಖಾತೆ ಹಂಚಿಕೆ ಟೆನ್ಶನ್; ಬಿಎಸ್ ವೈ ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿದ್ದಾರೆ.

ಕಾವೇರಿ ನಿವಾಸದಲ್ಲಿ ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ ಖಾತೆ ಹಂಚಿಕೆ ವಿಚಾರದಲ್ಲಿ ಗೊಂದಲ ಹಾಗೂ ಆನಂದ್ ಸಿಂಗ್, ಎಂಟಿಬಿ ನಾಗರಾಜ್ ಅವರ ಅಸಮಾಧಾನದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಒಂದೆ ಖಾತೆ ಹಂಚಿಕೆ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರೆ ಇನ್ನೊಂದೆಡೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಮೂಲ ಬಿಜೆಪಿ ಶಾಸಕರು ಸಿಎಂ ವಿರುದ್ಧ ತಿರುಗಿಬಿದ್ದಿದ್ದಾರೆ. ಒಟ್ಟಾರೆ ಸಂಪುಟ ರಚನೆ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಹೊಸ ತಲೆನೋವು ಶುರುವಾದಂತಾಗಿದೆ.
ಸಚಿವ ಆನಂದ್ ಸಿಂಗ್ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದೇನು?

Related Articles

Back to top button