

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು ರಾಜಕೀಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ಸರ್ಕಾರ ರಚನೆ ವಿಚಾರವಾಗಿ ರಣತಂತ್ರ ರೂಪುಸುತ್ತಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಹೈ ವೋಲ್ಟೇಜ್ ಮೀಟಿಂಗ್ ನಡೆಸಿರುವ ಬೆನ್ನಲ್ಲೇ ಇತ್ತ ಬಿಜೆಪಿ ಪಾಳಯದಲ್ಲಿಯೂ ಚಟುವಟಿಕೆ ಚುರುಕುಗೊಂಡಿದ್ದು, ತೆರೆ ಮರೆಯಲ್ಲಿ ತಂತ್ರ ಹೆಣೆಯುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಕುಮಾರಕೃಪ ರಸ್ತೆಯಲ್ಲಿರುವ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ, ಸಿಎಂ ಬೊಮ್ಮಾಯಿ, ಸಚಿವ ಬೈರತಿ ಸವರಾಜ್ ಸೇರಿದಂತೆ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಅತಂತ್ರ ಸ್ಥಿತಿ ಬಂದಲ್ಲಿ ಬಿಜೆಪಿ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ