Latest

ಯಡಿಯೂರಪ್ಪ ಹೇಳಿಕೆ ಸಮರ್ಥಿಸಿಕೊಂಡ ಸಿಎಂ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ಈ ಬಾರಿ 4-6 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಸ್ವತ: ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 4-6 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಇಲ್ಲ ಎಂಬ ವಿಚಾರವಾಗಿ ಸರ್ವೆ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಯಡಿಯೂರಪ್ಪನವರು ಅವರ ಅನುಭವದ ಆಧಾರದಲ್ಲಿ ಹೇಳಿದ್ದಾರೆ. ಅವರ ಮಾತಗಳನ್ನು ಅಲ್ಲಗಳೆಯಲು ಆಗಲ್ಲ ಎಂದರು.

ಇದೇ ವೇಳೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಅವರು ಇಂದು ಪ್ರಕಟಿಸಲಿದ್ದಾರೆ. ಈಗಾಗಲೇ ಅವರು ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸೇರ್ಪಡೆ ಬಗ್ಗೆ ಅವರೇ ಪ್ರಕಟಿಸುತ್ತಾರೆ ಎಂದು ತಿಳಿಸಿದರು.

Home add -Advt

Related Articles

Back to top button