Latest

ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದ್ದು, ಬೆಳೆ ಪರಿಹಾರ ನೀಡಲು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳೆ ಹಾನಿಯನ್ನು ಸಮೀಕ್ಷೆ ಮಾಡಲಾಗುತ್ತಿದ್ದು, ಬೆಳೆ ಹಾನಿಯಿಂದ ತರಕಾರಿ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಬಗ್ಗೆ ಕಣ್ಣಿರಿಸಲಾಗಿದ್ದು, ಭತ್ತದ ಹಾಗೂ ಇತರೆ ಧಾನ್ಯಗಳ ಎಂ.ಎಸ್.ಪಿ ಖರೀದಿ ಕುರಿತು ಮಹತ್ವದ ಸಭೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ನಿಗಾ ಇಡಲಾಗಿದೆ ಎಂದರು.

ಶೀಘ್ರಗಾಗಿ ಹಾಳಾಗುವ ವಸ್ತುಗಳ ಬಗ್ಗೆಯೂ ಸಂಪೂರ್ಣ ವರದಿ ಸಲ್ಲಿಸುವಂತೆ ತೋಟಗಾರಿಕೆ ಮತ್ತು ಕೃಷಿ ಇಲಾಖೆಗೆ ಸೂಚಿಸಿದೆ ಎಂದರು.

ಬೆಳೆ ಪರಿಹಾರದ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಅವರು ಪತ್ರ ಬರೆಯುವ ಮೊದಲೇ ಬೆಳೆ ಸಮೀಕ್ಷೆ ಮಾಡಿ ಕೂಡಲೇ ಪರಿಹಾರ ನೀಡಲು ಎಲ್ಲ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಅತಿ ಶೀಘ್ರದಲ್ಲಿ ಆರ್.ಅಂಡ್ ಡಿ ನೀತಿ ರೂಪಿಸಲಾಗುವುದು: ಸಿ.ಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button