Kannada NewsKarnataka NewsLatest

*ಕಂದಾಯ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕಂದಾಯ ಶಿರಸ್ತೇದಾರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಂದಾಯ ಶಿರಸ್ತೆದಾರ್ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ನಿವೇಶನ ಖಾತೆ ಬದಲಾವಣೆಗಾಗಿ ಹನುಮಂತ ಎಂಬುವವರಿಗೆ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅರುಣ್ ಕುಮಾರ್. ಮುಮ್ಗಡ ಹಣವಾಗಿ 1.5 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Home add -Advt

ಅರುಣ್ ಕುಮಾರ್ ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Related Articles

Back to top button