ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು, ರಾಜ್ಯದ ಜನತೆ ಕಾಯುತ್ತಿದ್ದಾರೆ. ಈ ನಡುವೆ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿಯ ಸವದತ್ತಿ ಯೆಲ್ಲಮ್ಮ ದೇವಸ್ಥಾನಕ್ಕೆ ಪತ್ನಿ ಚೆನ್ನಮ್ಮ ಜೊತೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರೇಣುಕಾ ಯೆಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ್ ಹಾಗೂ ಇತರ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.
ಎಕ್ಸಿಟ್ ಪೋಲ್ಸ್ ಆರ್ ಎಕ್ಸಿಟ್ ಪೋಲ್ಸ್
ಎಕ್ಸಿಟ್ ಪೋಲ್ಸ್ ಕೇವಲ ಎಕ್ಸಿಟ್ ಪೋಲ್ಸ್ ಅಷ್ಟೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸವದತ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಳೆದ ಬಾರಿ ಎಕ್ಸಿಟ್ ಪೋಲ್ ನಲ್ಲಿ ಕಾಂಗ್ರೆಸ್ ಗೆ 107, ಬಿಜೆಪಿ 80 ಹೇಳಲಾಗಿತ್ತು. ಆದರೆ ಅದು ಉಲ್ಟಾ ಆಗಿತ್ತು. ನಮಗೆ 104, ಅವರಿಗೆ 80 ಬಂತು ಉತ್ತರ ಪ್ರದೇಶದಲ್ಲಿ ಯೋಗಿ ಗೆಲ್ಲೋದಿಲ್ಲ ಅಂದಿದ್ದರು. ಅಲ್ಲಿ ಸಂಪೂರ್ಣ ಬಹುಮತದಿಂದ ಬಿಜೆಪಿ ಗೆದ್ದಿತು ಎಂದರು.
ದೇವಿ ಆಶೀರ್ವಾದ
ಪ್ರತಿಸಲದಂತೆ ಸವದತ್ತಿಗೆ ಬಂದಿದ್ದು,
ಮನೆ ದೇವರಾದ ಯಲ್ಲಮ್ಮನ ದರ್ಶನ ಮಾಡಿ , ದೇವಿ ಆಶೀರ್ವಾದವನ್ನು ಪಡೆಯಲು ಆಗಮಿಸಿದ್ದೇನೆ. ಪ್ರತಿಸಲವೂ ಈ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದು, ಯಲ್ಲಮ್ಮನ ಆಶೀರ್ವಾದ ಪಡೆದಿದ್ದೇನೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ