Kannada NewsKarnataka NewsLatest

ಬೆಳಗಾವಿಗೆ ಪ್ರಯಾಣಿಸಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಆಹಾರ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸಿದ್ದಾರೆ.

ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಚ್ ಎ ಎಲ್ ನಿಂದ ಬೆಳಗಾವಿಗೆ ಹೈದರಾಬಾದ್ ನಿಂದ ಆಗಮಿಸಿದ್ದ ವಿಶೇಷ ವಿಮಾನದ ಮೂಲಕ ಏರ್ ಲಿಫ್ಟ್ ಮಾಡಲಾಗಿದೆ. ಬೆಳಗಾವಿ ಜಿಲೆಯ ಬೆಲ್ಲದ ಬಾಗೇವಾಡಿಯ ಸ್ವಗ್ರಾಮದಲ್ಲಿ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ನೆರವೇರಲಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬೆಳಗಾವಿಯತ್ತ ತೆರಳಿದ್ದು, ಕೆಲವೇ ಸಮಯದಲ್ಲಿ ಸಿಎಂ ಬೆಳಗಾವಿ ತಲುಪಲಿದ್ದಾರೆ.

ಬೆಳಗಾವಿಯ ಹುಕ್ಕೇರಿಯಲ್ಲಿ ಸ್ವಯಂಘೋಷಿತ ಬಂದ್

https://pragati.taskdun.com/latest/umesh-kattideathhukkeribagewadibandh/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button