Latest

ಸಿದ್ದರಾಮಯ್ಯಗೆ ಸವಾಲು ಹಾಕಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೀದರ್: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಪರಿಶೀಲಿಸಿ ಸಂವಿಧಾನತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಲ್ಲೂರು ಗ್ರಾಮಕ್ಕೆ ಆಗಮಿಸಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಆದಿಚುಂಚನಗಿರಿ ಮಠದ ಪೂಜ್ಯ ನಿರ್ಮಲಾನಂದ ಸ್ವಾಮೀಜಿಗಳೂ ಕೂಡ ಮೀಸಲಾತಿ ಹೆಚ್ಚಿಸಬೇಕೆಂಬ ಬಗ್ಗೆ ಮಾತನಾಡಿರುವುದಕ್ಕೆ ಪ್ರತಿಕ್ರಯಿಸಿ, ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಿದ್ದು, ಎಲ್ಲರಿಗೂ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮುಂದೆ ಬರಬೇಕೆಂಬ ಆಶಯ ಇರುತ್ತದೆ ಎಂದರು.

ಸಿಪೆಟ್ ಯೋಜನೆಗೆ ರಾಜ್ಯ ಸರ್ಕಾರದ ಸಹಕಾರ :

ಕೇಂದ್ರ ಆರೋಗ್ಯ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ ಸುಖ್ ಮಾಂಡವೀಯ, ಕೇಂದ್ರ ನವೀಕರಿಸಬಹುದಾದ ಇಂಧನ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನೇತೃತ್ವದಲ್ಲಿ ಸಿಪೆಟ್ ಯೋಜನೆಯ ಸೆಂಟರ್ ಆಫ್ ಎಕ್ಸ್ ಲೆನ್ಸ್ ಕೇಂದ್ರ ಬೀದರ್ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವುದು ಸಂತೋಷದ ವಿಷಯ. ಈ ಯೋಜನೆಗೆ ಬೇಕಾದ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿರುವಂತೆ ಕಾಮಗಾರಿಯು ಪ್ರಾರಂಭವಾಗುತ್ತಿದೆ. ಇದಕ್ಕಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರುಗಳನ್ನು ಅಭಿನಂದಿಸುತ್ತೇನೆ ಎಂದರು.

ಜನಸಂಕಲ್ಪ ಯಾತ್ರೆಯಲ್ಲಿ ಜನರ ಉತ್ಸಾಹ ಕಾಣುತ್ತಿದೆ :

ಇಂದು ಬೀದರ್ ನ ಔರಾದ್ ಹಾಗೂ ಹುಮ್ನಾಬಾದ್ ನಲ್ಲಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗುತ್ತಿದ್ದು, ಬೃಹತ್ ಪ್ರಮಾಣ ಜನರು ಈ ಕಾರ್ಯಕ್ರಮಕ್ಕೆ ಸ್ಪಂದನೆಯನ್ನು ತೋರುತ್ತಿದ್ದಾರೆ. ಕಳೆದ ವಾರ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜನಸಂಕಲ್ಪ ಯಾತ್ರೆ ಕೈಗೊಂಡಾಗ ಅಭೂತಪೂರ್ವ ಜನಬೆಂಬಲ ದೊರಕಿತ್ತು. ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗುತ್ತಿರುವ ಜನರ ಉತ್ಸಾಹವನ್ನು ನೋಡಿದರೆ ಈ ಯಾತ್ರೆ ವಿಜಯಯಾತ್ರೆ ಯಾಗುವ ಎಲ್ಲ ಲಕ್ಷಣಗಳೂ ಕಂಡುಬರುತ್ತಿದೆ.

ಸಿದ್ದರಾಮಯ್ಯನವರು ಬಿಜೆಪಿ, ಆರ್ ಎಸ್ ಎಸ್ ಬಳಸದೇ ಭಾಷಣ ಮಾಡಲಿ :

ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಹೆಸರು ಬಳಸದೇ ಮುಖ್ಯಮಂತ್ರಿಗಳು ಭಾಷಣ ಮಾಡಲು ಸಾಧ್ಯವೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಭಾಷಣದಲ್ಲಿ ಯಾರಬಗ್ಗೆ ಮಾತನಾಡಬೇಕು ಎಂಬ ಬಗ್ಗೆ ನನಗೆ ತಿಳಿದಿದೆ. ಆದರೆ ಸಿದ್ದರಾಮಯ್ಯನವರು ಬಿಜೆಪಿ, ಆರ್ ಎಸ್ ಎಸ್, ಬೊಮ್ಮಾಯಿ ಎಂಬ ಬಗ್ಗೆ ಪ್ರಸ್ತಾಪಿಸದೇ ಭಾಷಣ ಮಾಡುತ್ತಾರೆಯೇ? ಭಾಷಣ ಮಾಡಲಿ ಎಂದು ಸವಾಲು ಹಾಕಿದರು.

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಮತ್ತಿಬ್ಬರು ಆರೋಪಿಗಳ ಬಂಧನ

https://pragati.taskdun.com/latest/kptcl-exam-scandal-2-accused-arrestedbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button