Latest

ತಜ್ಞರ ಸಲಹೆಯಂತೆ ಕ್ರಮ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೀದರ್: ಕೋವಿಡ್ ರೂಪಾಂತರ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಭಾಲ್ಕಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಒಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ತಜ್ಞರ ಮಾರ್ಗಸೂಚಿಯಂತೆ ಕ್ರಮ ವಹಿಸಿಸಲಾಗಿದೆ. ಡೆಲ್ಟಾ, ಒಮಿಕ್ರಾನ್, ಕೋವಿಡ್ ಸೇರಿದಂತೆ ಎಲ್ಲಾ ರೀತಿಯ ವೈರಸ್ ನಿಯಂತ್ರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.

ಈಗಾಗಲೇ ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ. ಕಾಲಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇದೇವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವಲೆಲ್ಲಾ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

Home add -Advt

ಮತ್ತೆ ಬಂದ್ ಆಗುತ್ತಾ ಶಾಲೆಗಳು…? ಹೆಮ್ಮಾರಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಕ್ಷಣ ಸಚಿವರು

 

Related Articles

Back to top button