Latest

ಹುಟ್ಟುಹಬ್ಬದ ಅಂಗವಾಗಿ ಗೋಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರ 62ನೇ ವರ್ಷದ ಹುಟ್ಟುಹಬ್ಬವಾಗಿದ್ದು, ನಾಡಿನ ಜನತೆ, ಸಾಮಾನ್ಯಜನರು, ಕ್ಷೇತ್ರದ ಜನತೆ, ಶಾಸಕರು, ಸಚಿವರು ಎಲ್ಲರೂ ಶುಭಾಷಯಗಳನ್ನು ಕೋರುತ್ತಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮ್ಮ ಆರ್ ಟಿ ನಗರ್ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಆದರೂ ಜನಸಾಮಾನ್ಯರು, ಕ್ಷೇತ್ರದ ಜನರು ರಾಜಕೀಯ ನಾಯಕರು ಎಲ್ಲರೂ ಶುಭಕೋರುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಿನ್ನೆಯೇ ಶುಭಕೋರಿದ್ದರು, ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭ ಕೋರೊದ್ದಾರೆ. ಅಮಿ ಶಾ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲರೂ ಶುಭಾಷಯ ತಿಳಿಸಿದ್ದಾರೆ ಎಂದರು.

ಎಲ್ಲರ ಶುಭ ಹಾರೈಕೆ ರಾಜ್ಯದ ಸಮಗ್ರ ಅಭಿವೃದ್ಧಿಗೆ, ವಿಶೇಷವಾಗಿ ರಾಜ್ಯದಲ್ಲಿ ಬಡವರು, ರೈತರು, ಮಹಿಳೆಯರು, ಒಬಿಸಿ ಎಸ್ ಸಿ ಎಸ್ಟಿ ಎಲ್ಲರ ಸೇವೆ ಮಾಡಲು ಶಕ್ತಿ ನೀಡುತ್ತಿದೆ. ಇನ್ನಷ್ಟು ಗಟ್ಟಿಯಾಗಿ, ಸ್ಫೂರ್ತಿಯಾಗಿ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ ಎಂದು ತಿಳಿಸಿದರು.

ರಾಜ್ಯದ ಅಭಿವೃದ್ಧಿಯ ಚಿತ್ರಣ ನೀಡುವ ಕಿರುಹೊತ್ತಿಗೆ:
ಸರ್ಕಾರ ಇಂದು 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕಿರು ಹೊತ್ತಿಗೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಲಾಗುವುದು . ಕಳೆದ 6 ತಿಂಗಳಲ್ಲಿ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ, ರೈತರಿಗೆ, ಮಹಿಳೆಯರಿಗೆ ತೆಗೆದುಕೊಂಡಿರುವ ತೀರ್ಮಾನ ಹಾಗೂ ಅದರ ಪರಿಣಾಮಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ ಎಂದರು.

ಚುನಾವಣಾ ವರ್ಷದ ಬಜೆಟ್:
ಮುಂಬರುವ ದಿನಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಚುನಾವಣೆ ವರ್ಷದ ಬಜೆಟ್ ಕೂಡಾ ಆಗಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಸಧೃಢ ಮಾಡುವುದು ಒಂದು ಕಡೆಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲ ವರ್ಗದ ಜನರಿಗೆ ಅಭಿವೃದ್ಧಿ ಮೂಲಕ ನ್ಯಾಯ ಒದಗಿಸುವ ಯೋಜನೆಗಳನ್ನು ರೂಪಿಸುವ ಉದ್ದೇಶವಿದೆ. ಎಲ್ಲಾ ಆಯಾಮಗಳು ನಮ್ಮ ಮುಂದಿದ್ದು, ಅವುಗಳಿಗೆ ದಿಕ್ಸೂಚಿಯನ್ನು, ವೇಗವನ್ನು ಹಾಗೂ ಗುರಿ ತಲುಪುವ ಗತಿಯನ್ನು ನೀಡಲು ಸಂಕಲ್ಪ ಮಾಡಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಾಲಬ್ರೂಯಿ ಅತಿಥಿಗೃಹದ ಪಕ್ಕದಲ್ಲಿರುವ ಶ್ರೀ ಭಗವಾನ್ ಶ್ರೀ ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ಆಶೀರ್ವಾದ ಪಡೆದರು. ನಂತರ ಸಕಲ ಕರ್ನಾಟಕದ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಅರ್ಚನೆ ಮಾಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button