ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆ ಟೆನ್ ಶನ್ ಆರಂಭವಾಗಿದ್ದು, ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ತೆರೆ ಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ.
ಖಾಲಿ ಇರುವ ನಾಲ್ಕು ಸ್ಥಾನಳಿಗಾಗಿ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಉಪಚುನಾವಣೆ ಮುಗಿಯುತ್ತಿದ್ದಂತೆ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಬಳಿ ಚರ್ಚಿಸಲಿದ್ದಾರೆ. ಹೈಕಮಾಂಡ್ ನಾಯಕರ ಭೇಟಿ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಿದ್ದಾರೆ.
ಇರುವ ನಾಲ್ಕು ಸ್ಥಾನಕ್ಕಾಗಿ ಸಚಿವಾಕಾಂಕ್ಷಿಗಳು ಭಾರಿ ಪೈಪೋಟಿ ನಡೆಸಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ, ಅರವಿಂದ್ ಬೆಲ್ಲದ್, ರಾಜು ಗೌಡ, ಎಸ್.ಎ ರಾಮದಾಸ್, ದತ್ತಾತ್ರೆಯ ಪಾಟೀಲ್ ರೇವೂರ, ನೆಹರು ಓಲೇಕಾರ್, ಜಿ.ಹೆಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ.
ಉಪಚುನಾವಣೆ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಸಂಪುಟ ವಿಸ್ತರಣೆ ಟೆನ್ ಶನ್ ಆರಂಭವಾಗಿದ್ದು, ಈಬಾರಿ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲ ಸ್ಥಾನ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಕಾಂಗ್ರೆಸ್ ನದ್ದು ಒಡೆದು ಆಳುವ ನೀತಿ; ಅಲ್ಪಸಂಖ್ಯಾತರಿಗೆ ಅನ್ಯಾಯ ಎಸಗಲಾಗಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ