Kannada NewsLatest

*ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಒಂದೆಡೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಸುವರ್ಣ ವಿಧಾನಸೌಧದ ಬಳಿ ಕಮಕಾರಹಟ್ಟಿಯಲ್ಲಿ ಬೃಹತ್ ಸಮಾವೇಶ ಆರಂಭವಾಗಿದ್ದರೆ ಮತ್ತೊಂದೆಡೆ ಮಿಸಲಾತಿ ವಿಚಾರವಾಗಿ ಚರ್ಚಿಸಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಸುವರ್ಣ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಇದೇ ವೇಳೆ ಪಂಚಮಸಾಲಿ ಸಮಾವೇಶದ ಸ್ಥಳಕ್ಕೆ ಸಚಿವ ಸಿ.ಸಿ.ಪಾಟೀಲ್, ಶಂಕರ ಮುನೇನಕೊಪ್ಪ ಭೇಟಿ ನೀಡಿದ್ದು, ಬಸವಜಯ ಮೃತ್ಯುಂಜಯ ಸ್ವಾಮಿಜಿ ಹಾಗೂ ಪಂಚಮಸಾಲಿ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಆಯೋಗದ ವರದಿ ಬಂದಿದೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ ಎಂದು ತಿಳಿಸಿದ್ದಾರೆ.

*ಪಂಚಮಸಾಲಿ ಮೀಸಲಾತಿ ಬೃಹತ್ ಸಮಾವೇಶ ಪ್ರಾರಂಭ*

https://pragati.taskdun.com/panchamasali-padayatrehirebagewadibelagavi/

Home add -Advt

Related Articles

Back to top button