Latest

ನಡ್ಡಾ ಜೊತೆ ಚರ್ಚೆ: ಸಚಿವ ಸಂಪುಟ ರಚನೆಗೆ ಇಂದೇ ಮುಹೂರ್ತ ಫಿಕ್ಸ್?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕರ ಸ್ವೀಕರಿಸಿರುವ ಬೆನ್ನಲ್ಲೇ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ನಿರೀಕ್ಷೆಗಳು ಗರಿಗೆದರಿವೆ.

ಈ ನಡುವೆ ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ ಎನ್ನಲಾಗಿದೆ.

ನಿನ್ನೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ವಿಚಾರವಾಗಿ ಜೆ.ಪಿ.ನಡ್ಡಾ ಬಳಿ ಚರ್ಚಿಸುತ್ತೇನೆ. ನಡ್ಡಾ ಅವರು ಯಾವುದೋ ಸಭೆ ನಡೆಸುತ್ತಿದ್ದು, ಸಭೆ ಬಳಿಕ ಅವರೊಂದಿಗೆ ಮಾತನಾಡಿ ನಿರ್ಧರಿಸುವುದಾಗಿ ತಿಳಿಸಿದರು.

ಅಂದರೆ, ಇಂದೇ ಸಚಿವಸಂಪುಟ ಕುರಿತು ಸಹ ಚರ್ಚೆ ನಡೆಯುವುದು ಪಕ್ಕಾ ಆಗಿದೆ. ಈ ಮೊದಲು ಸಿಎಂ, ಈ ಭೇಟಿಯಲ್ಲಿ ಸಚಿವಸಂಪುಟ ಕುರಿತು ಚರ್ಚಿಸುವುದುಲ್ಲ ಎಂದಿದ್ದರು.

ಇನ್ನು ಸೋಮವಾರ ಸಿಎಂ ಬೊಮ್ಮಾಯಿ ಮತ್ತೊಮ್ಮೆ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದ್ದು, ಒಂದೇ ಹಂತದಲ್ಲಿ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹೀಗಾಗಿ ಬುಧವಾರ ಅಥವಾ ಗುರುವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ: ಇಂದಿನಿಂದಲೇ ಜಾರಿ

ನೂತನ ಸಚಿವರ ಪಟ್ಟಿ ; ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ ಎಂದ ಸಿಎಂ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button