Latest

ಯಡಿಯೂರಪ್ಪ ನಿವಾಸಕ್ಕೆ ಸಚಿವಾಕಾಂಕ್ಷಿಗಳು ದೌಡು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳು ಕಸರತ್ತು ನಡೆಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೂಲಕ ಒತ್ತಡ ಹೇರಲು ಮುಂದಾಗಿದ್ದಾರೆ.

ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸಕ್ಕೆ ತೆರಳುತ್ತಿದ್ದಂತೆ ಯಡಿಯೂರಪ್ಪ ನಿವಾಸಕ್ಕೆ ತೆರಳಿರುವ ತೀರ್ಥಹಳ್ಳಿ ಶಾಸಕ ಅರಗ ಜ್ನಾನೇಂದ್ರ, ಕನಕಗಿರಿ ಶಾಸಕ ಬಸವರಾಜ್ ದಡೇಸಗೂರ್ ಸೇರಿದಂತೆ ಹಲವು ನಾಯಕರು ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದ್ದಾರೆ.

ಈ ಮೂಲಕ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದು, ಬೊಮ್ಮಾಯಿ ಮೇಲೆ ಒತ್ತಡ ತರುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕೇಂದ್ರದಿಂದ ರಾಜ್ಯದ ಪಾಲು ಪಡೆಯಲು ಪ್ರಯತ್ನಿಸುವೆ; ಸಿಎಂ ಬಸವರಾಜ್ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button