
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಧೈರ್ಯ ತುಂಬಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳ ಜತೆ ಮಾತನಾಡಿದ ಸಿಎಂ, ಅವರ ಸಮಸ್ಯೆ ಆಲಿಸಿದರು. ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು ಖಾರ್ಕೀವ್ ದಿಂದ 30 ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿ, ಭಾರತಕ್ಕೆ ವಾಪಸ್ ಆಗಲು ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡುತ್ತೇನೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಅಂದಾಜು 200 ವಿದ್ಯಾರ್ಥಿಗಳು ಕಾರಕಿವ್ ನಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಗೋಪಾಲಯ್ಯ ಉಪಸ್ಥಿತರಿದ್ದರು.
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳೆಲ್ಲ ಸುರಕ್ಷಿತ ವಾಪಸ್: ಹೆಬ್ಬಾರ್ ಅಭಯ