ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕೊರೊನಾ ಎರಡನೇ ಅಲೆ ಕಡಿಮೆಯಾದ ಬಳಿಕ ಈಗ ಮತ್ತೆ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಆರಂಭಿಕ ಹಂತದಲ್ಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬ್ಮೊಮ್ಮಾಯಿ, ಸೋಂಕು ಹೆಚ್ಚಾದ ಬಳಿಕ ಕಠಿಣ ಕ್ರಮಕೈಗೊಳ್ಳುವುದು, ನಂತರ ಲಾಕ್ ಡೌನ್ ನಂತಹ ಕ್ರಮದ ಮೂಲಕ ಜನರಿಗೆ ತೊಂದರೆ ಕೊಡುವುದಕ್ಕಿಂತ ಮುಂಚಿತವಾಗಿಯೇ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. ಹಾಗಾಗಿ ಪ್ರಮುಖವಾಗಿ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೊರ ರಾಜ್ಯಗಳಿಂದ ಬಂದವರನ್ನು ಪತ್ತೆ ಮಾಡಿ, ತಪಾಸಣೆ ಕೈಗೊಳ್ಳಬೇಕು. ಸೋಂಕಿತರಿಗೆ ಆಸ್ಪತ್ರೆ, ಬೆಡ್, ಆಕ್ಸಿಜನ್ ವ್ಯವಸ್ಥೆ ಹಾಗೂ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದರು.
ವ್ಯಾಕ್ಸಿನೇಷನ್ ಹೆಚ್ಚು ಸರಬರಾಜು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಗಡಿ ಜಿಲ್ಲೆಗಳಲ್ಲಿ ಲಸಿಕಾಕರಣ ಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು.
ವಿಶೇಷವಾಗಿ ಪೋಷ್ಠಿಕಾಂಶ ಕಡಿಮೆ ಇರುವ ಮಕ್ಕಳನ್ನು ಗುರುತಿಸಿ, ಸೂಕ್ತ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಪ್ರತಿ ಗ್ರಾಮದ ಶಾಲೆಗಳಲ್ಲಿ ವಾತ್ಸಲ್ಯ ಯೋಜನೆಯಡಿ ಹೆಲ್ತ್ ಕ್ಯಾಂಪ್ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ