Kannada NewsLatest

*ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿ ಹೆಚ್ ಡಿ ಮಾಡಿದ್ದಾರೆ; ರಾಜಕಾಲುವೆ ನುಂಗಿ ಹಾಕಿದ್ದೇ ಕಾಂಗ್ರೆಸ್; ಸಿಎಂ ಬೊಮ್ಮಾಯಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ಕಾಲದಲ್ಲಿ ಹತ್ತು ಹಲವಾರು ಹಗರಣಗಳು ಆಗಿವೆ. ಅವುಗಳನ್ನು ಮುಚ್ಚಿ ಹಾಕಲು ಸಿದ್ದರಾಮಯ್ಯ ಸರ್ಕಾರ ಲೋಕಾಯುಕ್ತವನ್ನೇ ಮುಚ್ಚಿಸಿತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿ ಹೆಚ್ ಡಿ ಮಾಡಿದ್ದಾರೆ. ತಮ್ಮ ಕಾಲದಲ್ಲಿನ ಭ್ರಷ್ಟಾಚಾರವನ್ನು ಮುಚ್ಚಿಡಲು ಈಗ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರನ್ನು ಹಾಳುಮಾಡಿದ್ದೇ ಕಾಂಗ್ರೆಸ್. ರಾಜಕಾಲುವೆ ನುಂಗಿ ಹಾಕಿದ್ದೆ ಕಾಂಗ್ರೆಸ್ ನವರು. ಭ್ರಷ್ತಾಚಾರಕ್ಕೆ ದೊಡ್ಡ ಕೊಡುಗೆಯನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಭ್ರಷ್ಟಾಚಾರ ಕಾಂಗ್ರೆಸ್ ಅವಿಭಾಜ್ಯ ಅಂಗ. ತಮ್ಮ ತಪ್ಪನ್ನು ಮುಚ್ಚಿಡಲು ಈಗ ಪ್ರತಿಭಟನೆ ಡ್ರಾಮ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 300 ಕಡೆಯಲ್ಲ ಎಲ್ಲಕಡೆ ಪ್ರತಿಭಟನೆ ಮಾಡಿದರೂ ಕಾಂಗ್ರೆಸ್ ಪ್ರತಿಭಟನೆಗೆ ಜನ ಹೋಗುವುದಿಲ್ಲ ಎಂದು ಹೇಳಿದರು.

*ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ*

Home add -Advt

https://pragati.taskdun.com/narishakti-tableaurepublic-daycm-basavaraj-bommaid-k-shivakumar/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button