ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಂಜೆ ನಡೆಯಲಿದೆ ಎನ್ನಲಾಗಿದ್ದ ಕೋವಿಡ್ ಸಭೆ ನಾಳೆಗೆ ಮುಂದೂಡಲಾಗಿದ್ದು, ನಾಳೆ ಸಂಜೆ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಈ ಕುರಿತು ಮಾಹಿತಿ ನೀಡಿದ್ದು, ನಾಳೆ ಸಂಜೆ 4 ಗಂಟೆಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಕೋವಿಡ್ ಟಫ್ ರೂಲ್ಸ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತಿರುವ ಹಿನ್ನೆಲೆಯಲ್ಲಿ ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ವೀಕೆಂಡ್ ಕರ್ಫ್ಯೂ ಜಾರಿಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಈ ನಿಟ್ಟಿನಲ್ಲಿ ಆಗಸ್ಟ್ 15ರ ಬಳಿಕ ಈಗಿರುವ ನೈಟ್ ಕರ್ಫ್ಯೂ ಜೊತೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟಾರೆ ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೋವಿಡ್ ಟಫ್ ರೂಲ್ಸ್ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಠಿಣ ನಿಯಮದ ಸುಳಿವು ನೀಡಿದ ಸಿಎಂ; ತಜ್ಞರ ತುರ್ತು ಸಭೆ ಕರೆದ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ