ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಲಿದ್ದು, ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮ ಜಾರಿ ಬಹುತೇಕ ಖಚಿತವಾಗಿದೆ.
ಕಠಿಣ ನಿಯಮ ಜಾರಿ ಬಗ್ಗೆ ಸಿಎಂ ಸುಳಿವು ನೀಡಿದ್ದು, ಇಂದು ಸಂಜೆ ತಜ್ಞರ ಜೊತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಅಗತ್ಯ. ಹಾಗಂತ ಜನರಿಗೆ ತೊಂದರೆ ಕೊಡುವುದು ನಮ್ಮ ಕೆಲಸವಲ್ಲ, ಆದರೆ ಸೋಂಕು ಹರಡುವ ಕೆಲಸವಾಗಬಾರದು. ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಚಿಂತನೆ ನಡೆಸಿ ಚರ್ಚಿಸಲಾಗುವುದು ಎಂದರು.
ಹಲವು ಬದಲಾವಣೆಗಳನ್ನು ಮಾಡಲು ಅವಕಾಶವಿದೆ. ಅದರಂತೆ ಯಾವರೀತಿ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಭೆಯಲ್ಲಿ ನಿರ್ಧರಿಸಲಾಗುವುದು. ಇನ್ನು ವೀಕೆಂಡ್ ಕರ್ಫ್ಯೂ ಬಗ್ಗೆಯೂ ಸಂಜೆಯೇ ಹೇಳುತ್ತೇನೆ ಎಂದು ಹೇಳಿದರು.
ನಾಳೆಯೇ ಕಠಿಣ ನಿಯಮ ಘೋಷಣೆ ಬಹುತೇಕ ಪಕ್ಕಾ
ಕಾರಿನಲ್ಲೇ ಬೆಂಕಿಹಚ್ಚಿಕೊಂಡು ಸಜೀವ ದಹನಗೊಂಡ ಪ್ರೇಮಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ