Kannada NewsLatest

*ಡಿ.ಕೆ.ಶಿವಕುಮಾರರಿಂದ ನಾವು ಪಾಠ ಕಲಿಯಬೇಕಿಲ್ಲ; ಸಿಎಂ ಬೊಮ್ಮಾಯಿ ಗುಡುಗು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಗಡಿ ಭಾಗದ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿರುವ ವಿಚಾರವಾಗಿ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು ಮಹಾರಾಷ್ಟ್ರ ಸರ್ಕಾರದವರು ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು?ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಸರ್ಕಾರ ಯಾವ ರೀತಿ ಅನುದಾನ ಬಿಡುಗಡೆ ಮಾಡಿದೆ ಎಂಬುದನ್ನು ಪರಿಶೀಲಿಸುತ್ತೇವೆ. ಮಹಾರಾಷ್ಟ್ರ ಸರ್ಕಾರದ ಹಸ್ತಕ್ಷೇಪ ಯಾವ ರೀತಿ ತಡೆಯಬೇಕು ಎಂಬುದನ್ನು ಪರಾಮರ್ಶೆ ಮಾಡುತ್ತೇವೆ ಎಂದರು.

Home add -Advt

ನಾವು ಕೂಡ ಮಹಾರಾಷ್ಟ್ರದಲ್ಲಿರುವ ಪಂಡರಾಪುರ, ತುಳಜಾಪುರಕ್ಕೆ ಹೋಗುವ ಕರ್ನಾಟಕದವರಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಾರಾಷ್ಟ್ರ ಸರ್ಕಾರದವರು ಯಾವ ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇವೆ. ಅವರು ರಾಜ್ಯದ ಗಡಿ ಭಾಗಕ್ಕೆ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು? ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Related Articles

Back to top button