Latest

ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ?; ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರ ಈಗಾಗಲೇ ಶಾಲಾ ಮಕ್ಕಳ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.

ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ?
ರಾಜ್ಯದ ಜನರ ಬಳಿ ಭಿಕ್ಷೆ ಬೇಡಿಯಾದರೂ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಿಸುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ ಎಂದು ಪ್ರಶ್ನಿಸಿದರು.
ಶಿಕ್ಷಣ ಸಚಿವರು ಚಡ್ಡಿ-ಬನಿಯನ್ ನಲ್ಲೇ ವಿಧಾನಸೌಧಕ್ಕೆ ಬರಲಿ; ಬಿ.ಸಿ.ನಾಗೇಶ್ ಗೆ ಡಿ.ಕೆ.ಶಿವಕುಮಾರ್ ತಿರುಗೇಟು

Related Articles

Back to top button