Latest

ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ; ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಗರಿ ಗೆದರಿದ ಆಕಾಂಕ್ಷೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೇಂದ್ರ ಸಚಿವರುಗಳ ಜತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಿಎಂ ಬೊಮ್ಮಾಯಿ ಇಂದಿನಿಂದ ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರಲಿದ್ದು, ಇಂದು ಸಂಜೆ 7 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಸಮಸ್ಯೆ, ಮೇಕೆದಾಟು ಯೋಜನೆ ಜಾರಿ ಸೇರಿದಂತೆ ಹಲವು ವಿಚಾರ ಚರ್ಚಿಸಲಿದ್ದಾರೆ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಸಿಎಂ ಜತೆ ಇರಲಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರ ಭೇಟಿಗೂ ಸಮಯ ನಿಗದಿಯಾಗಿದೆ. ಕೇಂದ್ರ ಸಚಿವರ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಈ ವೇಳೆ ಸಂಪುಟ ವಿಸ್ತರಣೆ ವಿಚಾರವನ್ನು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಸಿಎಂ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಹಲವು ಮಹತ್ವದ ಸಮಾಲೋಚನೆಗಳು ನಡೆಯಲಿದ್ದು, ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಆಕಾಂಕ್ಷೆ ಗರಿ ಗೆದರಿದೆ. ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಅವರು ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಈಗಲಾದರೂ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಲಿದೆಯೇ ಕಾದುನೋಡಬೇಕು.
ಬಂಗಾರದ ಬೆಲೆ ಮತ್ತಷ್ಟು ಕುಸಿತ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button