ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಹಲವು ಮಹತ್ವದ ವಿಚಾರ ಚರ್ಚಿಸುವ ನಿಟ್ಟಿನಲ್ಲಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ದೆಹಲಿಗೆ ಹೋಗುತ್ತೀದ್ದೇನೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಜೆ.ಪಿ.ನಡ್ಡಾ ಭೇಟಿಗೆ ಇನ್ನೂ ಸಮಯ ನೀಡಿಲ್ಲ, ಅವರು ಸಮಯ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಚರ್ಚಿಸಲು ಹಿರಿಯ ನ್ಯಾ.ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಸಂವಿಧಾನವನ್ನೇ ತಿರುಚಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನವನ್ನು ಗಾಳಿಗೆ ತೂರಿ ವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ ಎಲ್ಲರನ್ನೂ ಜೈಲಿಗೆ ಹಾಕಿರುವಂತಹ ಕಾಂಗ್ರೆಸ್ ಪಕ್ಷದಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು.
https://pragati.taskdun.com/private-bus-overturns-several-injured/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ