Kannada NewsLatest

*ಅಧಿವೇಶನದ ನಡುವೆಯೇ ದೆಹಲಿಗೆ ತೆರಳಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿವೇಶನದ ನಡುವೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ವರಿಷ್ಠರ ಕರೆ ಮೇರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಬೆಳಗಾವಿಯಿಂದ ದೆಹಲಿಗೆ ತೆರಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ದೆಹಲಿಯತ್ತ ಪ್ರಯಾಣಿಸಿದ್ದು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದ್ದಾರೆ.

Home add -Advt

ಇದಕ್ಕೂ ಮುನ್ನ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ನವದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ. ಕಳೆದ ಬಾರಿ ಕೆಲವೊಂದು ವಿಷಯಗಳ ಚರ್ಚೆ ಅಪೂರ್ಣವಾಗಿದ್ದರಿಂದ ಪುನ: ಕರೆದಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಜೆ.ಪಿ.ನಡ್ಡಾ ಸಭೆಯನ್ನು ಕರೆದಿದ್ದಾರೆ. ಪಕ್ಷದ ಮುಖಂಡರು, ಕೇಂದ್ರ ಗೃಹ ಸಚಿವರು ಸಭೆಯಲ್ಲಿ ಉಪಸ್ಥಿತರಿದ್ದು, ಚುನಾವಣಾ ತಯಾರಿ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲ ವಿಚಾರಗಳನ್ನು ಚರ್ಚಿಸಲಾಗುವುದು. ಈ ಸಭೆಯಲ್ಲಿ ಭಾಗವಹಿಸಿ ನಾಳಿನ ಅಧಿವೇಶನಕ್ಕೆ ವಾಪಸ್ಸು ಬರಲಿದ್ದೇನೆ. ಸಚಿವ ಸಂಪುಟ ವಿಸ್ತರಣೆ, ಖಾಲಿ ಸಚಿವ ಸ್ಥಾನ ಭರ್ತಿ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ತಿಳಿಸಿದರು.
*ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ; ಹೊಸ ವರ್ಷಾಚರಣೆಗೂ ಖಡಕ್ ರೂಲ್ಸ್ ಜಾರಿ*

https://pragati.taskdun.com/new-yearguidliner-ashokcovid-case/

Related Articles

Back to top button