ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತನ ಮನೆ ಮೆಲೆ ಐಟಿ ದಾಳಿ ನಡೆದಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಬಿಎಸ್ ವೈ ಆಪ್ತನ ಮನೆ ಮೇಲೆ ಐಟಿ ದಾಳಿ ಬೆನ್ನಲ್ಲೆ ಒಂದು ದಿನದ ಮಟ್ಟಿಗೆ ಸಿಎಂ ದೆಹಲಿ ಪ್ರವಾಸ ಕೈಗೊಂಡಿರುವುದು ಚರ್ಚೆಗೆ ಕಾರಣವಾಗಿದೆ.
ಇನ್ನು ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿದೆ. ಮಂತ್ರಿ ಸ್ಥಾನಕ್ಕಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಮೇಲೆ ಒತ್ತಡ ಹೇರಿದ್ದು, ಸಂಪುಟ ವಿಸ್ತರಣೆ ನಿಟ್ಟಿನಲ್ಲಿಯೂ ಹೈಕಮಾಂಡ್ ಅನುಮತಿ ಪಡೆಯಲಿದ್ದಾರೆ.
ಅಲ್ಲದೇ ಹಾನಗಲ್, ಸಿಂದಗಿ ಎರಡು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸ್ಥಿತಿಗತಿ ಬಗ್ಗೆಯೂ ಹೈಕಮಾಂಡ್ ಗಮನಕ್ಕೆ ತರಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಸಿಎಂ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.
ರೈತರ ಕಣ್ಣೀರು ಒರೆಸುವ ದಿಲೀಪ್ ಕುಮಾರ್ ಕನಸಿಗೆ ನೀರೆರೆದ ಸಚಿವರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ