ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದು, ಈ ವೇಳೆ ಹೈಕಮಾಂಡ್ ಭೇಟಿಯಾಗಿ ಹಲವು ವಿಷಯ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.
ಖಾಲಿಯಿರುವ ನಾಲ್ಕು ಸಚಿವ ಸ್ಥಾನ ಭರ್ತಿ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ, ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ದಟ್ಟವಾಗಿದೆ.
ಈ ನಡುವೆ ಖಾಲಿಯಿರುವ ಸಚಿವ ಸ್ಥಾನಕ್ಕಾಗಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಸೇರಿದಂತೆ ಹಲವು ಶಾಸಕರು ಲಾಬಿ ನಡೆಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಇಂದು ಆರ್.ಟಿ.ನಗರ ನಿವಾಸದಲ್ಲಿ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಪಟ್ಟುಹಿಡಿದಿದ್ದಾರೆ.
5 ರೂಪಾಯಿ ನಾಣ್ಯ ನುಂಗಿದ್ದ ಬಾಲಕಿ; ದಾರುಣ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ