Latest
ದಿಢೀರ್ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರ ಒಪ್ಪಿಗೆ ಪಡೆಯಲು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ತೆರಳಿದ್ದಾರೆ.
ಹೈಕಮಾಂಡ್ ನಿಂದ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ಸಂಜೆ 5:40ರ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದು, ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ದೆಹಲಿಯಿಂದ ವಾಪಸ್ ಆಗಲಿದ್ದಾರೆ.
ಮಂಗಳವಾರ ಅಥವಾ ಬುಧವಾರವೇ ನೂತನ ಸಚಿವರ ಪದಗ್ರಹಣ ಕೂಡ ನಡೆಯುವ ಸಾಧ್ಯತೆ ಇದೆ. ಒಟ್ಟಾರೆ ಸಚಿವ ಸ್ಥಾನಕ್ಕಾಗಿ ಹಲವರ ಲಾಬಿ, ಯುವ ಹಾಗೂ ಹೊಸ ಮುಖಗಳಿಗೆ ಆದ್ಯತೆ ನಿಟ್ಟಿನಲ್ಲಿ ಯಾರೆಲ್ಲ ಬೊಮ್ಮಾಯಿ ಸಂಪುಟ ಸೇರಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಆದಷ್ಟು ಬೇಗ ಸಚಿವ ಸಂಪುಟ ರಚನೆ ಮಾಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯ




