Latest

*ಬ್ಯಾಡಗಿ ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಎಲ್ಲಾ ಮೂಲಸೌಕರ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಬ್ಯಾಡಗಿ ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಎಲ್ಲಾ ಮೂಲಸೌಕರ್ಯ ವ್ಯವಸ್ತೆಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಗದ್ಗುರು ಜಯದೇವ ಮುರುಘಾರಾಜೇಂದ್ರ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಆಣೂರು, ಬುಡಪನಹಳ್ಳಿ ಹಾಗೂ ಆಸುಂಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ, ಆಣೂರು ಮತ್ತು ಕಬ್ಬೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ, ಕಾಗಿನೆಲೆಯ ಕನಕ ಮ್ಯೂಸಿಯಂ ಹಾಗೂ ನಿಸರ್ಗ ಚಿಕಿತ್ಸಾ ಕೇಂದ್ರದ ಉದ್ಘಾಟನೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ಸಂಕೀರ್ಣ, ಕೃಷಿ ವಸ್ತುಸಂಗ್ರಾಹಲಯ, ಇ-ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರ ಕಟ್ಟಡ ಶಂಕಸ್ಥಾಪನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ಬ್ಯಾಡಗಿ ತಾಲ್ಲೂಕಿನಲ್ಲಿ ಮೆಣಸಿನಕಾಯಿ ಜೊತೆಗೆ ತರಕಾರಿ, ಜೋಳ, ಹತ್ತಿಯನ್ನು ಬೆಳೆಯುತ್ತಾರೆ. ಇವುಗಳಿಗೆ ಸಂಸ್ಕರಣಾ ಘಟಕವನ್ನು ನಿರ್ಮಿಸಿ ಅದರ ಮೌಲ್ಯವೃದ್ಧಿ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಎಲ್ಲಾ ಉತ್ತೇಜನವನ್ನು ನೀಡಲಿದೆ ಎಂದರು.

ಹಾವೇರಿಯಲ್ಲಿ ಒಂದು ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿಯಾಗುತ್ತಿದೆ. ಶಾಶ್ವತವಾಗಿರುವ ಕೆಲಸಗಳಿಗೆ ನಮ್ಮ ಸರ್ಕಾರ ಅತ್ಯಂತ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದೆ. ರೈತಶಕ್ತಿ ಯೋಜನೆಯಡಿ ಸುಮಾರು 392.51 ಕೋಟಿ ಹಣವನ್ನು ಡಿಬಿಟಿ ಮೂಲಕ ಖಾತೆಗಳಿಗೆ ಒದಗಿಸಲಾಗಿದೆ. 11 ಲಕ್ಷ ವಿದ್ಯಾರ್ಥಿಗಳಿಗೆ 460 ಕೋಟಿ ರೂ.ಗಳನ್ನು ಈಗಾಗಲೇ ರೈತ ವಿದ್ಯಾನಿಧಿಯಡಿ ನೀಡಲಾಗಿದೆ. ಯಾವುದೇ ಅರ್ಜಿಯಿಲ್ಲದೇ ಈ ಸೌಲಭ್ಯವನ್ನು ಒದಗಿಸಲಾಗಿದೆ. 6 ಲಕ್ಷ ರೈತ ಕೂಲಿಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಪೈಕಿ 2 ಲಕ್ಷ ಮಕ್ಕಳು ವಿವಿಧ ಹಂತದ ವಿಧ್ಯಾಭ್ಯಾಸದಲ್ಲಿ ತೊಡಗಿದ್ದಾರೆ. 47,747 ಮಕ್ಕಳಿಗೆ ವಿದ್ಯಾನಿಧಿ ಬಿಡುಗಡೆ ಮಾಡಲಾಗಿದೆ. ರೈತರಿಗೆ ಶಕ್ತಿ ತುಂಬಿದರೆ ಅನ್ನ ನೀಡುತ್ತಾನೆ. ಆಹಾರಭದ್ರತೆ ಇರಯವ ದೇಶ ಸ್ವಾಭಿಮಾನಿ, ಸ್ವಾವಲಂಬಿ ದೇಶವಾಗುತ್ತದೆ. ಕೃಷಿಗೆ ಉತ್ತೇಜನ ನೀಡುವ ಕೇಂದ್ರ ಬಜೆಟ್ ಇಂದು ಮಂಡಿಸಲಾಗಿದೆ. ಸುಮಾರು ಒಂದೂವರೆ ಲಕ್ಷ ಕೋಟಿ ರೂ.ಗಳನ್ನು ಕೃಷಿವಲಯಕ್ಕೆ ಮೀಸಲಿಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದ್ದಾರೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ. ಬರಗಾಲಪೀಡಿತರಾದವರಿಗೆ ಕೇಂದ್ರ ಸರ್ಕಾರ ದೊಡ್ಡ ಸಹಾಯವನ್ನು ಮಾಡಿದೆ. ಸಮಸ್ತ ಕನ್ನಡಿಗರ ವಿಶೇಷವಾಗಿ ಮಧ್ಯ ಕರ್ನಾಟಕದ ಜನರ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Home add -Advt

ಬೆಳೆಗಳ ಸಂಸ್ಕರಣಾ ಘಟಕಕ್ಕೆ ಸಹಾಯಧನ
ಸುಮಾರು 750 ಕೋಟಿ ರೂ.ಗಳ ವಿಮೆ ಹೆಚ್ಚುವರಿ ಕಂತನ್ನು ರೈತರ ಪರವಾಗಿ ರಾಜ್ಯ ಸರ್ಕಾರ ಕಟ್ಟಿದೆ. ಈ ಪ್ರಸ್ತಾವನೆಗೆ ಮಂಜೂರಾತಿ ಕೊಟ್ಟು ಇಲ್ಲಿಗೆ ಬಂದಿದ್ದೇನೆ. ಇಂದು ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ 15000 ಕೋಟಿ ರೂ.ಗಳಷ್ಟು ಹಣ ರೈತರಿಗೆ ಒದಗಿಸಲಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ರೈತಾಪಿ ವರ್ಗಕ್ಕೆ ಸಹಾಯ ಮಾಡಲಾಗುವುದು. ರೈತ ಅಭಿವೃದ್ಧಿಯಾದಾಗ ಸಾರ್ಥಕತೆ ಕಾಣಬಹುದು. ಬ್ಯಾಡಗಿ ತಾಲ್ಲೂಕಿನಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಕೆರೆ ನಿರ್ಮಾಣ ಸೇರಿದಂತೆ ಎಲ್ಲಾ ರಂಗಗಳಲ್ಲಿ ಅಭಿವೃದ್ಧಿಗೆ ಮಂಜೂರಾತಿ ನೀಡಲಾಗಿದೆ. ಮೋಟೆಬೆನ್ನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸಬೇಕು ಎಂಬ ಬಹಳ ದಿನಗಳ ಬೇಡಿಕೆಗೆ ಸ್ಪಂದಿಸಿ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗುವುದು. ಈ ಭಾಗದ ಬೆಳೆಗಳ ಸಂಸ್ಕರಣಾ ಘಟಕಕ್ಕಾಗಿ ವಿಶೇಷ ಸಹಾಯಧನ ನೀಡಲು ಉತ್ತೇಜನ ನೀಡಲು ಸಿದ್ಧವಿದ್ದೇವೆ ಎಂದರು.

ಅತಿ ಶೀಘ್ರದಲ್ಲಿ ವೈದ್ಯಕೀಯ ಕಾಲೇಜು ಉದ್ಘಾಟನೆ
ರಾಜ್ಯದಲ್ಲ 12 ಶೀತಾಗಾರಗಳನ್ನು ಸ್ಥಾಪಿಸಲಾಗಿದ್ದು, ಜನರೇಟರ್‍ಗಳಿಗಾಗಿ ಹೆಚ್ಚುವರಿ ಅನುದಾನವನ್ನು ಕೋರಲಾಗಿದೆ. ಅದಕ್ಕೂ ಮಂಜೂರಾತಿ ನೀಡಲಾಗುವುದು. ಬ್ಯಾಡಗಿ ನಗರ ಬೆಳೆಯಬೇಕು. ಬಸವೇಶ್ವರನಗರ ಹಾಗೂ ಮುಖ್ಯ ರಸ್ತೆಗೆ ಕೆಲಸವನ್ನು ಮಾಡಲಾಗುವುದು ಎಂದು ಭಾರವಸೆ ನೀಡಿದರು. ಅಭಿವೃದ್ಧಿಯ ಚಕ್ರ ನಿರಂತರವಾಗಿ ನಡೆಯಬೇಕು. ಹಾವೇರಿ ಜಿಲ್ಲೆಯ ವೈದ್ಯಕೀಯ ಕಾಲೇಜನ್ನು ಅತಿ ಶೀಘ್ರದಲ್ಲಿಯೇ ಉದ್ಘಾಟಿಸಲಾಗುವುದು. ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜು, ನೀರಾವರಿ ಯೋಜನೆ, ಹಾವೇರಿ ಅಭಿವೃದ್ಧಿ, ಮೆಗಾ ಡೈರಿ, ಮೆಗಾ ಎಪಿಎಂಸಿ , ಜವಳಿ ಪಾರ್ಕ್ ಮಾಡಿದ್ದು ನಮ್ಮ ಸರ್ಕಾರ. ಅಭಿವೃದ್ಧಿಯ ಬಗ್ಗೆ ನೈತಿಕತೆಯಿಂದ ನಾವು ಮಾತ್ರ ಮಾತನಾಡಲು ಸಾಧ್ಯ ಎಂದರು.

*ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ: ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ*

https://pragati.taskdun.com/union-budgetlakshmi-hebbaalkarreactionbelagavi/

 

Related Articles

Back to top button