ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಪ್ರಯಾಣ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.
ಸಿಎಂ ಬೊಮ್ಮಾಯಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಲು ಹೆಚ್ ಎ ಎಲ್ ಗೆ ಆಗಮಿಸಿದ್ದರು. ಆದರೆ ಅವರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ಬ್ಯಾಟರಿ ಸಮಸ್ಯೆಯಿಂದಾಗಿ ತಾಂತ್ರಿಕ ದೋಷ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ ಎ ಎಲ್ ನಲ್ಲಿಯೇ ಕಾದು ಕುಳಿತಿದ್ದಾರೆ. ಸಿಎಂ ಜತೆ ಕಂದಾಯ ಸಚಿವ ಆರ್.ಅಶೋಕ್ ಕೂಡ ಇದ್ದಾರೆ ಎನ್ನಲಾಗಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಇನ್ನೂ ಎರಡು ಗಂಟೆ ತಡವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಯಲ್ಲಿ ಆರಂಭವಾಗಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಸಮಯವನ್ನು ಮುಂದೂಡಲಾಗಿದ್ದು, ಸಂಜೆ 7 ಗಂಟೆಗೆ ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ