ಜತ್ ತಾಲೂಕು ಕರ್ನಾಟಕ್ಕೆ; ಗಂಭೀರ ಚಿಂತನೆ
ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಮಹಾರಾಷ್ಟ್ರಲ್ಲಿರುವ ಕನ್ನಡಿಗರು ಯಾರು ಏಕೀಕರಣ, ಸ್ವಾತಂತ್ರ್ಯ ಹೋರಾಟ ನಿಟ್ಟಿನಲ್ಲಿ ಭಾಗಿಯಾಗಿದ್ದರು. ಅವರ ದಾಖಲೆಗಳನ್ನು ತರಿಸಿ ಅವರಿಗೆ ಪಿಂಚಣಿ ಕೊಡಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿದೆ.
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗಡಿ ವಿವಾದದ ಮೂಲಕ ಕನ್ನಡಿಗರನ್ನು ಕೆಣಕುತ್ತಿರುವ ಮಹಾರಾಷ್ಟ್ರಕ್ಕೆ ಇದೇ ಮೊದಲ ಬಾರಿಗೆ ಕರ್ನಾಟಕ ಸರಕಾರ ಮಾಸ್ಟರ್ ಸ್ಟ್ರೋಕ್ ನೀಡಿದೆ.
ಜತ್ ತಾಲೂಕಿನಲ್ಲಿ ತೀವ್ರ ಬರಗಾಲದಿಂದಾಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲಿನ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ಅಲ್ಲಿನ ಗ್ರಾಮಪಂಚಾಯಿತಿಗಳು ಒತ್ತಾಯಿಸುತ್ತಿದ್ದು, ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಮರಾಠಿ ನಿಯೋಗ ಭೇಟಿ ಮಾಡುವಂತೆ ಮಹಾ ಸಿಎಂ ಏಕನಾಥ್ ಶಿಂದೆ ಹೇಳಿಕೆ ವಿಚಾರವಾಗಿ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮ್ಮ ನಿಯೋಗ ಮರಾಠಿ ನಿಯೋಗ ಭೇಟಿ ಮಾಡುವುದು, ಮರಾಠಿಗರು ನಮ್ಮ ನಿಯೋಗ ಭೇಟಿಯಾಗುವುದು ಸಹಜ. ಎಲ್ಲಾ ಭಾಷಿಕರನ್ನೂ ಒಂದೇ ರೀತಿಯಲ್ಲಿ ನೋಡಿಕೊಳ್ಳುತ್ತಿದೇವೆ. ಮಹಾರಾಷ್ಟ್ರದಲ್ಲಿ ಕನ್ನಡಿಗರು ದೊಡ್ದ ಸಂಖ್ಯೆಯಲ್ಲಿರುವಾಗ ಅಲ್ಲಿನ ಕನ್ನಡಿಗರ ಹಿತರಕ್ಷಣೆ ನಮ್ಮ ಕರ್ತವ್ಯ. ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹಚ್ಚುವ ಕೆಲಸವನ್ನು ಮಹಾರಾಷ್ಟ್ರ ಸಿಎಂ ಮಾಡಬಾರದು ಎಂದು ಹೇಳಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಮಹಾರಾಷ್ಟ್ರಲ್ಲಿರುವ ಕನ್ನಡಿಗರು ಯಾರು ಏಕೀಕರಣ, ಸ್ವಾತಂತ್ರ್ಯ ಹೋರಾಟ ನಿಟ್ಟಿನಲ್ಲಿ ಭಾಗಿಯಾಗಿದ್ದರು. ಅವರ ದಾಖಲೆಗಳನ್ನು ತರಿಸಿ ಅವರಿಗೆ ಪಿಂಚಣಿ ಕೊಡಿಸಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿದೆ. ಮಹಾರಾಷ್ಟ್ರದಲ್ಲಿ ಕನ್ನಡಿಗರು ಬಹುದೊಡ್ಡ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಅಲ್ಲಿರುವ ಕನ್ನಡಿಗರ ರಕ್ಷಣೆ ಹಿತ ಕಾಯುವುದು ನಮ್ಮ ಕರ್ತವ್ಯ. ಎರಡೂ ರಾಜ್ಯಗಳು ಒಗ್ಗಟ್ಟಿನಲ್ಲಿ ಸಾಗಬೇಕು. ಅನಗತ್ಯವಾಗಿ ರಾಜ್ಯ ರಾಜ್ಯಗಳ ನಡುವೆ ವೈಷಮ್ಯ ಬಿತ್ತುವ ಕೆಲಸವನ್ನು ಮಹಾ ಸಿಎಂ ಮಾಡಬಾರದು ಎಂದು ಹೇಳಿದರು.
*ಗಡಿವಿವಾದ: ಕರ್ನಾಟಕವನ್ನು ಕೆರಳಿಸಿದ ಮಹಾರಾಷ್ಟ್ರ, ತುರ್ತು ಸಭೆ ನಡೆಸಿದ ಸಿಎಂ ಬೊಮ್ಮಾಯಿ*
https://pragati.taskdun.com/border-dispute-formation-of-a-team-of-strong-senior-lawyers-cm-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ