ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಂತ್ರಿಗಿರಿಗಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗಡುವು, ಅಸಮಾಧಾನ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ಭಾವನೆ ನಮಗೆ ಅರ್ಥವಾಗಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕ ವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.
ಸಿಬಿಐ ದಾಳಿ
ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಗೆ ಉತ್ತರಿಸಿ ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಅವರ ಬಳಿ ಇರುವ ಪ್ರಕರಣ ಇದೆ ಅದರ ಮೇಲೆ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದರು.
ಹಾಲಾಲ್ ಕಟ್
ಹಾಲಾಲ್ ಕುರಿತು ಸುದ್ದಿದಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಹಾಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.
*ಮಂತ್ರಿಗಿರಿಗಾಗಿ ಸಿಎಂ ಗೆ ಗಡುವು ನೀಡಿದ ಕೆ.ಎಸ್.ಈಶ್ವರಪ್ಪ; ಕುತೂಹಲ ಮೂಡಿಸಿದ ಮುಂದಿನ ನಡೆ*
https://pragati.taskdun.com/k-s-eshwarappapressmeetcabinet-expantioncm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ