ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದು, ಮಧ್ಯಾಹ್ನ 12:30ಕ್ಕೆ ಬೊಮ್ಮಾಯಿ ಅವರಿಂದ ಮೊದಲ ಪೂರ್ಣ ಬಜೆಟ್ ಮಂಡನೆಯಾಗಲಿದೆ.
ಸಿಎಂ ಮಂಡಿಸುತ್ತಿರುವ ಬಜೆಟ್ ಕುರಿತು ರಾಜ್ಯಾದ್ಯಂತ ಜನರಿಗೆ ನಿರೀಕ್ಷೆಗಳು ಹೆಚ್ಚಿವೆ. ನೀರಾವರಿ, ಕೃಷಿ, ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಹೆಚ್ಚು ಒತ್ತು ನೀಡುವ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.
ಹಣದುಬ್ಬರ, ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರು ಬಜೆಟ್ ಮೇಲೆ ಸಹಜವಾಗಿಯೇ ನಿರೀಕ್ಷೆ ಇಟ್ತುಕೊಂಡಿದ್ದು, ಎಂದಿನಂತೆ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ, ಮೂಲಸೌಕರ್ಯ, ಪ್ರವಾಸೋದ್ಯಮ, ಲೋಕೋಪಯೋಗಿ ವಲಯಗಳಿಗೆ ಹೆಚ್ಚಿನ ಮಹತ್ವ ಸಿಗಬೇಕು ಎಂಬ ಆಗ್ರಹಗಳು ಕೇಳಿಬಂದಿವೆ.
ಜನಪ್ರಿಯ ಬಜೆಟ್ ಮಂಡಿಸುವ ಹುಮ್ಮಸ್ಸಿನಲ್ಲಿರುವ ಸಿಎಂ, ರೈತಪರ, ಜನಪರ, ಎಲ್ಲಾ ವರ್ಗಗಳಿಗೆ ತಲುಪುವ ಉತ್ತಮ ಬಜೆಟ್ ಮಂಡಿಸುವ ನಿರೀಕ್ಷೆ ಇದೆ. ಪ್ರಮುಖವಾಗಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ಇರುವುದರಿಂದ ಸಿಎಂ ಇಂದು ಮಂಡಿಸಲಿರುವ ಬಜೆಟ್ ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ