Latest

ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ; ಶೀಘ್ರದಲ್ಲಿಯೇ ವಿವಿಧ ಯೋಜನೆಗಳು ಅನುಷ್ಠಾನಕ್ಕೆ; ಸಿಎಂ ಭರವಸೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ವಿವಿಧ ಯೋಜನೆಗಳು ಅನುಷ್ಟಾನಕ್ಕೆ ಬರಲಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನವೆಂಬರ್ 19ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗುವುದು. ಕಾರವಾರದಲ್ಲಿ 280 ಕೋಟಿ ರೂಪಾಯಿಯಲ್ಲಿ ಬಂದರು ನಿರ್ಮಾಣವಾಗುತ್ತಿದೆ. ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಇಂಡಸ್ಟ್ರಿಯಲೈಜೇಶನ್ ಮಾಡುತ್ತಿದ್ದೇವೆ ಎಂದರು.

ದಾವಣಗೆರೆ, ಶಿವಮೊಗ್ಗ, ರಾಯಚೂರಿನಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಜೊತೆಗೆ ರಾಜ್ಯದಲ್ಲಿ 3 ಸಾವಿರ ಕೋಟಿ ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಈ ಮೂಲಕ ಸಮಗ್ರ ಕರ್ನಾಟಕ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ

https://pragati.taskdun.com/politics/bjpexecutive-meetingbangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button