Latest

ಸ್ಯಾಂಡಲ್ ವುಡ್ ನಟನಿಗೆ ಸಿಸಿಬಿಯಿಂದ ಬಿಗ್ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸ್ಯಾಂಡಲ್ ವುಡ್ ನಟ ದಿಗಂತ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ನೀಡಿದ್ದು, 2ನೇ ಬಾರಿಗೆ ವಿಚಾರಣೆಗೆ ಬುಲಾವ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಳಿಗ್ಗೆ 11 ಗಂಟೆಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ನಟ ದಿಗಂತ್ ಗೆ ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿಗಂತ್ ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.

Related Articles

ಸೆ.16ರಂದು ನಟ ದಿಗಂತ್ ಹಾಗೂ ಐಂದ್ರಿತಾ ರೇ ದಂಪತಿ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಇಬ್ಬರೂ ತಾವು ಡ್ರಗ್ಸ್ ಸೇವನೆ ಮಾಡುವುದಿಲ್ಲ, ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದಿದ್ದರು. ಆದರೆ ಇಬ್ಬರ ಮೊಬೈಲ್ ನಲ್ಲಿ ಕೆಲ ಮಹತ್ವದ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಈ ಈ ನಿಟ್ಟಿನಲ್ಲಿ ನಟ ದಿಗಂತ್ ಅವರನ್ನು ಮತ್ತೆ ವಿಚಾರಣೆಗೆ ಕರೆಯಲಾಗಿದೆ. ಆದರೆ ನಟಿ ಐಂದ್ರಿತಾ ಅವರನ್ನು ಈ ಬಾರಿ ವಿಚಾರಣೆಗೆ ಕರೆಯಲಾಗಿಲ್ಲ ಎನ್ನಲಾಗಿದೆ.

Home add -Advt

Related Articles

Back to top button