Latest

ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಮೀಸಲಿರಿಸುವಂತೆ ಮನವಿ ಮಾಡಿದರು.

ಸಮಸ್ಯೆಗಳು:

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಅನುದಾನ ಮೀಸಲಿಡುವ ಕುರಿತು

1995 ರ ನಂತರ ಆರಂಭಗೊಂಡ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು

Home add -Advt

ಕಾಲ್ಪನಿಕ‌ ವೇತನ ಬಡ್ತಿ ಸಮಸ್ಯೆ ಬಗೆಹರಿಸುವ ಕುರಿತು

ಅನುದಾನ ಸಿಬ್ಬಂದಿಗಳಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು

ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಕುರಿತು

ಅನುದಾನ ರಹಿತ ಐ.ಟಿ.ಐ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು

1987-95ರ‌ ಮದ್ಯದಲ್ಲಿ ಆರಂಭಗೊಂಡ ಸಾಮಾನ್ಯ ಆಡಳಿತ ಮಂಡಳಿಯ ಅನುದಾನ‌ ರಹಿತ ಪದವಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು,

ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಕುರಿತು

ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವೈದ್ಯಕೀಯ ವೆಚ್ಚ ಪಾವತಿ ಮಾಡುವ ಕುರಿತು

ಆರ್ಥಿಕ‌ ಮಿತವ್ಯಯದ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆಯುವ ಕುರಿತು ಚರ್ಚಿಸಿದರು.

ಸದಸ್ಯರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ಮು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸ್ಯಾಂಡಲ್ ವುಡ್ ನಟ ಚೇತನ್ ನಾಪತ್ತೆ; ಪತ್ನಿ ಕಣ್ಣೀರು

Related Articles

Back to top button