Karnataka News

*ಬೆಳ್ಳಂಬೆಳಿಗ್ಗೆ ಕಂದಕಕ್ಕೆ ಉರುಳಿ ಬಿದ್ದ ಆಲ್ಟೋ ಕಾರು: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ.

Home add -Advt

ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು. ನಿದ್ದೆ ಮಂಪರಿನಲ್ಲಿ ಕಾರು ಓಡಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Related Articles

Back to top button