ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಹೊಸ ಯೋಜನೆಗಳನ್ನು ಘೋಷಿಸಿ ಗಮನ ಸೆಳೆದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇದೀಗ ಮತ್ತೊಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.
ಮುಖ್ಯಮಂತ್ರಿಗಳ ಮನೆಯಲ್ಲಿ ಮೊಬೈಲ್ ನಿಷೇಧ ಮಾಡಲಾಗಿದೆ. ಹೌದು. ಸಿಎಂ ಬೊಮ್ಮಾಯಿ ನಿವಾಸದಲ್ಲಿ ಮೊಬೈಲ್ ನಿಷೇಧಿಸಲಾಗಿದ್ದು, ಈ ಬಗ್ಗೆ ನಿವಾಸಕ್ಕೆ ಅಧಿಕೃತವಾಗಿ ಬೋರ್ಡ್ ಹಾಕಲಾಗಿದೆ.
ಸಿಎಂ ಭೇಟಿಗೆ ಬರುವ ಸಾರ್ವಜನಿಕರು ಸಿಎಂ ನಿವಾಸಕ್ಕೆ ಮೊಬೈಲ್ ತರುವಂತಿಲ್ಲ. ಸಿಎಂ ನಿವಾಸದಲ್ಲಿ ಸಾರ್ವಜನಿಕರಿಗೆ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಬ್ಬಂದಿಗಳು ಬೋರ್ಡ್ ಹಾಕಿದ್ದಾರೆ.
ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ