Latest

*ಎನ್.ಹೆಚ್.ಎಂ ನೌಕರರ ಮುಷ್ಕರ: ಎರಡು ದಿನಗಳಲ್ಲಿ ಸಭೆ: ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ರಾಷ್ಟ್ರೀಯ ಆರೋಗ್ಯ ಯೋಜನೆ ನೌಕರರ ಮುಷ್ಕರದ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನೇಮಕಾತಿ ಸಂದರ್ಭದಲ್ಲಿ ನೌಕರರಿಗೆ ಸೇವಾ ಷರತ್ತುಗಳು ವಿಧಿಸಲಾಗುತ್ತದೆ. ಅವರಿಗೆ ವೇತನ ಹೆಚ್ಚಳ ಮಾಡಬೇಕು ಎನ್ನುವ ಉದ್ದೇಶವಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಎಲ್ಲಾ ಸಿದ್ಧತೆಗಳೊಂದಿಗೆ ಬರಲು ತಿಳಿಸಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸರಿಪಡಿಸಲಿದ್ದಾರೆ
ರಾತ್ರಿ ಸುರಿದ ಮಳೆಯಿಂದ ರಾಮನಗರ ಬಳಿ ರಸ್ತೆ ಜಲಾವೃತಗೊಂಡಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸರಿಪಡಿಸಲಿದ್ದಾರೆ. ಮಳೆ ಬಂದಾಗ ಸಣ್ಣಪುಟ್ಟ ಸಮಸ್ಯೆಗಳಾಗುವುದು ಸಹಜ ಎಂದರು.
ಎಂಟು ಸಾವಿರ ಕೋಟಿ ಖರ್ಚು ಮಾಡಿ ಇಡೀ ದೇಶವನ್ನೇ ಮೈಸೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದೆ. ಈ ಬಗ್ಗೆ ಎಲ್ಲರೂ ಹೆಮ್ಮೆಪಡಬೇಕು ಎಂದರು.

Home add -Advt

ವಿಶೇಷ ಪ್ಯಾಕೇಜ್
ಚಾಮರಾಜನಗರ ವಿಶೇಷ ಪ್ಯಾಕೇಜ್ ಬಗ್ಗೆ ಡಿಸಿ ಅವರು ವರದಿ ನೀಡಿದ್ದು ನಾಳೆ ನಾಡಿದ್ದರಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದರು

ಬೇರೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿರುವುದರಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಪ್ರತಿಮೆ ಅನಾವರಣಕ್ಕೆ ಬರಲಾಗಲಿಲ್ಲ ಎಂದರು.

ಉರಿಗೌಡ, ನಂಜೇಗೌಡ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Related Articles

Back to top button