
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು.
ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದಲ್ಲದೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಯ ಕುರಿತೂ ಸಹ ಕೇಂದ್ರ ಸಚಿವರ ಗಮನಸೆಳೆದರು.
ನಡ್ಡಾ ಜೊತೆ ಚರ್ಚೆ: ಸಚಿವ ಸಂಪುಟ ರಚನೆಗೆ ಇಂದೇ ಮುಹೂರ್ತ ಫಿಕ್ಸ್?
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ