Latest

*ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ.

ಈನಡುವೆ ಸಿಎಂ ಬಸವರಾಜ್ ಬೊಮ್ಮಾಯಿ, ಶಿಗ್ಗಾಂವಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಏ.19ರಂದು ಮತ್ತೊಮ್ಮೆ ಶಕ್ತಿಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.

Home add -Advt

ನಾಮಪತ್ರ ಸಲ್ಲಿಕೆಗೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾವಿಯ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ್ ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ, ಇಂದು ಸಾಂಕೇತಿಕವಾಗಿ ಬಿಜೆಪಿ ಅಭ್ಯರ್ಥಿಯಾಗಿ ಶಿಗ್ಗಾವಿಯಿಂದ ನಾಮಪತ್ರ ಸಲ್ಲಿಸಿದ್ದೇನೆ. ಕ್ಷೇತ್ರದಲ್ಲಿ ಎಲ್ಲಾ ವರ್ಗದ ಅಭಿವೃದ್ಧಿಗಾಗಿ ಒತ್ತು ನೀಡಿದ್ದೇನೆ. ಜನರು ಈಬಾರಿ ಹೆಚ್ಚಿನ ಬೆಂಬಲ ಕೊಡಲಿದ್ದಾರೆ. ಕ್ಷೇತ್ರದಲ್ಲಿ ನಾನು ಮಾಡಿದ ಕೆಲಸವೇ ನನಗೆ ಶ್ರೀರಕ್ಷೆ ಆಗಲಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಈ ಬಾರಿಯೂ ಮತ್ತೊಮ್ಮೆ ಆಯ್ಕೆಯಾಗುತ್ತೇನೆ. ಶಿಗ್ಗಾಂವಿ ಕ್ಷೇತ್ರದ ಜನತೆ ಮತ್ತೊಮ್ಮೆ ಆಶಿರ್ವದಿಸುವ ವಿಶ್ವಾಸವಿದೆ ಎಂದು ಹೇಳಿದರು.

Related Articles

Back to top button